ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ-ಪೋಷಕರ‌ ಪಾದಪೂಜಾ ಕಾರ್ಯಕ್ರಮ

ದೊಡ್ಡಬಳ್ಳಾಪುರ ನಗರದ ಹೆಸರಾಂತ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.

ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮದಲ್ಲಿ ಪೋಷಕರು, ಮಕ್ಕಳು ಬಹಳ ಸಂತಸದಿಂದ ಪಾಲ್ಗೊಂಡು ಮಕ್ಕಳು ತಮ್ಮ ಪೋಷಕರುಗಳಿಗೆ ಲವಲವಿಕೆಯಿಂದ ಪಾದಪೂಜೆ ಮಾಡಿದರು. ಮಕ್ಕಳಿಂದ ಪಾದಪೂಜೆ ಮಾಡಿಸಿಕೊಂಡ ಪೋಷಕರು ಭಾವುಕರಾದರು…

ಪಾದಪೂಜೆ ಕಾರ್ಯಕ್ರಮದಲ್ಲಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ಮಕ್ಕಳಿಗೆ ನೀಡಿ ಪೋಷಕರ ಪಾದಪೂಜೆ ಮಾಡಿಸಲಾಯಿತು.

ಶಾಲೆಯಲ್ಲಿ ನಡೆದ ಪಾದಪೂಜೆಯ ಕುರಿತು ಶಾಲೆಯ ಕಾರ್ಯದರ್ಶಿ ಸತೀಶ್ ರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಜನ್ಮದಾತರಿಗೆ ಪಾದಪೂಜೆಯನ್ನು ನಡೆಸಲಾಗಿತ್ತು.‌ ಪಾದಪೂಜೆಯ ಮುಖ್ಯ ಉದ್ದೇಶ, ಮಕ್ಕಳು ಪೋಷಕರನ್ನು ಕಡೆಗಣಿಸುವುದನ್ನು ತಡೆಯಲು, ಮಕ್ಕಳಿಗೆ ವಿದ್ಯೆಯ ಜೊತೆ ನೈತಿಕ ಶಿಕ್ಷಣವನ್ನು ನೀಡಬೇಕು. ಮಕ್ಕಳ ಕರ್ತವ್ಯ, ಬಾಧ್ಯತೆಗಳೇನು ಏನೆಂಬುದನ್ನು ತಿಳಿಸಿಕೊಡುವುದು, ತಂದೆ- ತಾಯಿ ಮಕ್ಕಳ ಸಂಬಂದವನ್ನು ಗಟ್ಟಿಗೊಳಿಸುವುದು ಎಂದು ಹೇಳಿದರು.

ಪೋಷಕರು ಮಾತನಾಡಿ, ತಂದೆ-ತಾಯಿಗಳ ತಮ್ಮ ಮಕ್ಕಳು ಗೌರವ ಹಾಗೂ ಸಂಸ್ಕಾರದ ಕಲಿಯಬೇಕು‌ ಎಂಬುದು ಗುರುಕುಲ ಪದ್ಧತಿಯಲ್ಲಿತ್ತು. ಈ ಒಂದು ಅಂಶವನ್ನು ಈ ಶಾಲೆ ಅಳವಡಿಸಿಕೊಂಡಿದೆ. ಈಗ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬರಬೇಕು ಎಂಬುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಇಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಿದ್ದಾರೆ, ಇದರ ಭಾಗವಾಗಿ ಶಾಲೆಯಲ್ಲಿ ಶಾರದೆಯ ಪೂಜೆಯ ಅಂಗವಾಗಿ ಪಾದಪೂಜೆ ನಡೆಸುತ್ತಿದ್ದಾರೆ. ಇದು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಜಾಗೃತಿ ಮೂಡುವಂತಹ ಕಾರ್ಯಕ್ರಮವಾಗಿದೆ. ಇದರಿಂದ ಪೋಷಕರು ಮಕ್ಕಳಿಗೆ ಹೇಗೆ ಕಲಿಸಬೇಕು ಅನ್ನೋದು ತಿಳಿದುಬರುತ್ತದೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ, ಪಾದಪೂಜೆ ನಡೆಯುತ್ತದೆ ಎಂದು ಕೇಳಿದ್ದೆ, ಆದರೆ ಇಲ್ಲಿಗೆ ಬಂದ ಮೇಲೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತುಂಬ ಸಂತೋಷವಾಯಿತು. ನಾನು ಇಂದು ನಮ್ಮ ಪೋಷಕರ ಪಾದಪೂಜೆ ಮಾಡಿದೆನು. ಇದರಿಂದ ಸಂತಸವಾಗಿದ್ದು, ನಮ್ಮ ಸಾಧನೆಗೆ ಸ್ಫೂರ್ತಿ ಸಿಗುತ್ತದೆ ಎಂದರು. ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ನಾನು ಈ ಶಾಲೆಯಲ್ಲಿ ಓದುತ್ತಿರುವುದು ಹೆಮ್ಮಯ ವಿಚಾರ ಎಂದರು.

ಈ ವೇಳೆ ನ್ಯಾಷನಲ್ ಪ್ರೈಡ್ ಶಾಲೆಯ ಸಂಸ್ಥಾಪಕರಾದ ಸಿ.ಎನ್ ನಾಗರಾಜು, ಮುಖ್ಯ ಶಿಕ್ಷಕಿ ರಶ್ಮಿ, ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಎಲ್ಲಾ ಪೋಷಕರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

3 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

7 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

15 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

17 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

20 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

21 hours ago