ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ, ಪೋಷಕರ ಪಾದಪೂಜೆ ಕಾರ್ಯಕ್ರಮ

ದೊಡ್ಡಬಳ್ಳಾಪುರದ ಪ್ರತಿಷ್ಠಿತ ಶಾಲೆಯಾದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯವಾಗಿ ಎದುರಿಸಲಿ, ಒಳ್ಳೆಯ ಸಂಸ್ಕಾರ ಪಡೆಯಲಿ ಎಂಬ ಉದ್ದೇಶದಿಂದ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಪೂಜೆಯನ್ನು ಶಾಲೆಯ ಸಂಸ್ಥಾಪಕರಾದ ಸಿ ನಾಗರಾಜು ಕಾರ್ಯದರ್ಶಿ ಸತೀಶ್ ರಾಜ್, ಮುಖ್ಯ ಶಿಕ್ಷಕಿ ರಶ್ಮಿ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಶಾಲೆಯ ಎಲ್ಲಾ ಪೋಷಕರು ಪೂಜಾ ಕಾರ್ಯಗಳಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿದ್ದರು.

“ಮಾತೃ ದೇವೋ ಭವ ಪಿತೃ ದೇವೋ ಭವ” ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ತಂದೆ ತಾಯಿಯ ಮಹತ್ವ ಎಷ್ಟು, ಯಾವ ರೀತಿ ಗೌರವದಿಂದ ಕಾಣಬೇಕು, ತಂದೆ ತಾಯಿಗಳೆ ನಮಗೆ ಕಣ್ಣಿಗೆ ಕಾಣುವ ದೇವರ ಸಮಾನ ಎಂಬ ಕಲ್ಪನೆಯನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಅರಿವಿಗೆ ತರಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಪೋಷಕರನ್ನು ವಿಶೇಷ ವ್ಯವಸ್ಥೆ ಮಾಡಿ, ಸಾಲಾಗಿ ಕೂರಿಸಿ ತಮ್ಮ ಮಕ್ಕಳಿಂದ ಪಾದಗಳಿಗೆ ಪೂಜೆಯನ್ನು ಮಾಡಿಸಿ, ತಂದೆ ತಾಯಿಯಿಂದ ಆಶೀರ್ವಾದವನ್ನು ಮಾಡಿಸಲಾಯಿತು. ಇದು ಮಕ್ಕಳ ವಿದ್ಯಾಭ್ಯಾಸದ ಕಡೆ ಧನಾತ್ಮಕ ಪ್ರಗತಿಯನ್ನು ನೀಡಲಿದೆ. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಪೋಷಕರು ಆಶೀರ್ವದಿಸಿ ಸಂತೃಪ್ತ ಭಾವನೆಯನ್ನು ವ್ಯಕ್ತಪಡಿಸಿದರು ವಿದ್ಯಾರ್ಥಿಗಳು ಸಹ ತಂದೆ ತಾಯಿ ಆಶೀರ್ವಾದದ ಮಹತ್ವವನ್ನು ಅರಿತು ಸುಸಂದರ್ಭವನ್ನು ಸ್ಮರಿಸಿದರು.

ಸರಸ್ವತಿ ಪೂಜೆಯು ವಿದ್ಯಾರ್ಥಿಗಳಲ್ಲಿ ವಿದ್ಯೆಯ ಕಡೆಗೆ ಗಮನಹರಿಸಿ ವಿದ್ಯೆ, ಬುದ್ಧಿಯನ್ನು ನೀಡಮ್ಮ ಎಂದು ಸ್ಮರಿಸಿ, ಪೂಜಿಸುವ ಪೂಜಾ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು, ಅವರು ಓದಿದ್ದೆಲ್ಲ ನೆನಪಿಗೆ ಬರಲು, ತಾಯಿ ಶಾರದೆ ಆಶೀರ್ವಾದ ಮಕ್ಕಳಿಗೆ ಸಿಗಲಿ ಎಂದು ಭಕ್ತಿಯಿಂದ ತಾಯಿ ಶಾರದೆಯನ್ನು ಪೂಜಿಸಲಾಯಿತು. ಕೊನೆಯಲ್ಲಿ ಪ್ರಸಾದವನ್ನು ನೀಡಲಾಯಿತು.

ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರವಾದ ಆಚರಣೆ ಇದು ಕೇವಲ ಒಂದು ಸಂಪ್ರದಾಯವಲ್ಲ ಅದು ಕೃತಜ್ಞತೆ ಗೌರವ ಮತ್ತು ಭಕ್ತಿಯ ಸಂಕೇತವಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಸತೀಶ್ ರಾಜ್ “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು” ಹಾಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ತಂದೆ ತಾಯಿಗಳನ್ನು ಗೌರವಿಸುವುದು. ವಿನಯ ವಿಧೇಯತೆಯಿಂದ ನಡೆದುಕೊಳ್ಳುವುದು ಹೇಗೆ ಎಂದು ಕಲಿಸಿ ಉತ್ತಮ ಪ್ರಜೆಯನ್ನಾಗಿ ನಿರ್ಮಿಸುವುದು, ನಮ್ಮ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಗಳಿಗೆ ಪೂಜಿಸಿ ಆಶೀರ್ವಾದ ಪಡೆಯುವ ಕಾರ್ಯಕ್ರಮ ಇದಾಗಿದೆ.  ಇದರ ಮೂಲಕ ಎಲ್ಲ ವಿದ್ಯಾರ್ಥಿಗಳು ಯಶಸ್ಸನ್ನ ಗಳಿಸಲಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಲಿ ಎಂದು ಬಯಸುತ್ತೇನೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ತುಂಬಾ ಉತ್ಸಾಹದಿಂದ ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿ, ತುಂಬಾ ಸಂತೋಷ ಮತ್ತು ಗೌರವ ಸಮರ್ಪಣ ಭಾವವನ್ನು ವ್ಯಕ್ತಪಡಿಸಿದರು.

ಯಶಸ್ವಿಯಾಗಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ನ್ಯಾಷನಲ್ ಪ್ರೈಡ್ ಶಾಲೆಯ ಆಡಳಿತ ಮಂಡಳಿ ಧನ್ಯವಾದಗಳನ್ನು ಅರ್ಪಿಸಿತು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

7 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

11 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

14 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago