ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಅಷ್ಟೆ ಎಂದು ಸಿಎಂ ಸಿದ್ದರಮಯ್ಯ ಹೇಳಿದರು
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದರು.
ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದರು.
ದಾವಣಗೆರೆಯಲ್ಲಿ ಅನೈತಿಕ ಸಂಬಂಧದ ಆರೋಪದ ಮೇಲೆ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ, ಅಪರಾಧ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಖಚಿತ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಹೇಳಿದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…