ನ್ಯಾಷನಲ್ ಹೆರಾಲ್ಡ್ ವಿಚಾರ: ಇ.ಡಿ ಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ನಾವು ಹೆದರಲ್ಲ- ಸಿಎಂ ಸಿದ್ದರಾಮಯ್ಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ‌ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಅಷ್ಟೆ ಎಂದು ಸಿಎಂ ಸಿದ್ದರಮಯ್ಯ ಹೇಳಿದರು

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದರು.

ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದರು.

ದಾವಣಗೆರೆಯಲ್ಲಿ ಅನೈತಿಕ ಸಂಬಂಧದ ಆರೋಪದ ಮೇಲೆ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ, ಅಪರಾಧ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಖಚಿತ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

10 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

19 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago