ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಹೋರಾಟಕ್ಕೆ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವೀಗೊಳಿಸಬೇಕೆಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ನರೇಶ ತಿಳಿಸಿದರು.
ಕಛೇರಿಪಾಳ್ಯದ ಸಾವಿರಕಣ್ಣಮ್ಮ ದೇವಸ್ಥಾನದ ಬಳಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಅಧ್ಯಕ್ಷತೆಯಲ್ಲಿ ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಕ ಮಾಡಿ ಸಮೀಕ್ಷೆ ನಡೆಸಿ ವರದಿಯನ್ನು ಪಡೆದು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ನೇರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶವು ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿದೆ ಎಂದರು.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡಿ ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳಬೇಕು ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರವು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿದರು.
ಮುಖಂಡರಾದ ಮಂಜುನಾಥ್ ಮಾತನಾಡಿ, ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ಸಮೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸದೇ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯ ಅಂಕಿಅಂಶಗಳನ್ನು ಕ್ರೂಢೀಕರಿಸದೇ ಒಂದು ಜಾತಿಯನ್ನು ಒಲೈಸಲು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆಯನ್ನು 14 ಭಾಗಗಳಾಗಿ ವಿಂಗಡಿಸಿ 1.38ಲಕ್ಷ ಬಲಗೈ ಸಮುದಾಯದ ಜನಸಂಖ್ಯೆಯನ್ನು ಆಲೆಮಾರಿ ಗುಂಪಿಗೆ, 2,58,915 ಜನಸಂಖ್ಯೆಯನ್ನು ಮಾದಿಗರ ಗುಂಪಿಗೆ ಸರ್ಕಾರದ ನಿಬಂಧನೆಗಳಿಗೆ ವಿರುದ್ಧವಾಗಿ 4,74,954 ಜನರನ್ನು ಆದಿಕರ್ನಾಟಕ, ಆದಿ-ದ್ರಾವಿಡ ಹಾಗೂ ಆದಿ-ಆಂಧ್ರಗಳೆಂದು ವಿಂಗಡಿಸಿ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಲು ಶಿಫಾರಸ್ಸು ಮಾಡಿರುವುದಲ್ಲದೇ ಜನರಲ್ ಮೆರಿಟ್ ನಲ್ಲಿ ನೇಮಕವಾಗಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ನೌಕರರನ್ನು ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿರುವುದಲ್ಲದೇ ಸಾಮಾನ್ಯ ಸ್ಥಾನಗಳಲ್ಲಿ ಗೆದ್ದಿರುವ ಜನಪ್ರತಿನಿಧಿಗಳನ್ನು ಬಲಗೈ ಜನ ಪ್ರತಿನಿಧಿಗಳ ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿ ದುರುದ್ದೇಶ ಪೂರಿತವಾದ ಪಕ್ಷಪಾತದಿಂದ ಕೂಡಿದ ವರದಿಯನ್ನು ಸಿದ್ಧಪಡಿಸಿ ಚೆನ್ನಾಗಿ ಉಂಡವರು, ತ್ಯಾಗ ಮಾಡಬೇಕು ಎಂದು ಉದ್ದೇಶ ಪೂರ್ವಕವಾಗಿಯೇ ಬಲಗೈ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೌಲಭ್ಯ ದೊರೆಯದಂತೆ ವರದಿ ನೀಡಿರುತ್ತಾರೆ. ಸದರಿ ವರದಿಯನ್ವಯ ರಾಜ್ಯ ಸರ್ಕಾವು ಪರಿಶಿಷ್ಟ ಜಾತಿಯ ಬಲಗೈ ಸಮುದಾಯವನ್ನು ಗ್ರೂಪ್ – ‘ಬಿ’ಗೆ ಸೇರಿಸುವುದರ ಮೂಲಕ ಯಾವುದೇ ಉನ್ನತ ಹುದ್ದೆಗಳು ಹೊಲಯ/ಛಲವಾದಿ ಬಲಗೈ ಸಮುದಾಯಕ್ಕೆ ಸಿಗದಂತೆ ರೋಸ್ಟರ್ ಬಿಂದುಗಳನ್ನು ನಿಗದಿಪಡಿಸಿರುವುದು ಖಂಡನೀಯ ಎಂದರು.
15+3ರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟವು ಸರ್ಕಾರಕ್ಕೆ ಈ ಮೂಲಕ ಸ್ಪಷ್ಟವಾಗಿ ಎಚ್ಚರಿಸುತ್ತದೆ ಎಂದು ತಿಳಿಸಿದರು.
ಈ ವೇಳೆ ಮುಖಂಡರಾದ ತಿಮ್ಮರಾಯಪ್ಪ, ರಮೇಶ, ಗೂಳ್ಯ ಹನುಮಣ್ಣ, ಮುನಿರಾಜು, ವಡ್ಡರಹಳ್ಳಿ ರಾಜಗೋಪಾಲ್, ಕೊನಘಟ್ಟ ರಾಮಾಂಜಿನಪ್ಪ, ಮಧುಸೂಧನ್, ಮಂಜುನಾಥ್, ಶ್ರೀನಿವಾಸ್, ನಾಗರಾಜ್ ಸೇರಿದಂತೆ ಅನೇಕರು ಹಾಜರಿದ್ದರು.
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ....…
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ. ಈ ಕ್ರೀಡಾಕೂಟದಲ್ಲಿ ಜೈ…
ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇಂದು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು…