ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ.
ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ, ಹಿರಿಯ ಸಾಹಿತಿ & ಚಿಂತಕರಾದ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ & ಮಾಜಿ ಎಂಎಲ್‌ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್ ಕೋಚ್ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ & ರಾಜಕೀಯ ವಿಶ್ಲೇಷಕರಾದ ಶಶಿಧರ್ ಭಟ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸಾರಿಗೆ & ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಸನ್ಮಾನ್ಯ ಅರಣ್ಯ ಚಿವರಾದ ಈಶ್ವರ್ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್, ಕನ್ನಡ, ಸಂಸ್ಕೃತಿ & ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ, ವಿಧಾನಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್.ಕಿರಣ್ ಕುಮಾರ್, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್ ಸಂಪಾದಕರಾದ ರವಿ ಎಸ್. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…