ನ್ಯಾ. ಸಂತೋಷ್ ಹೆಗಡೆ, ನಟಿ ತಾರಾಗೆ ಜೀ ವಾಹಿನಿಯ ‘ ವೀರ ಕನ್ನಡಿಗ ಪ್ರಶಸ್ತಿ’

ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್‌ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್‌-2025 ಪ್ರದಾನ ಮಾಡುತ್ತಿದೆ.

ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ.

ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್‌ ಹೆಗ್ಡೆ, ಹಿರಿಯ ಸಾಹಿತಿ & ಚಿಂತಕರಾದ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ & ಮಾಜಿ ಎಂಎಲ್‌ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್‌ ಕೋಚ್‌ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ & ರಾಜಕೀಯ ವಿಶ್ಲೇಷಕರಾದ ಶಶಿಧರ್‌ ಭಟ್‌ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಸಾರಿಗೆ & ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್‌.ಕೆ.ಪಾಟೀಲ್‌, ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿ, ಸನ್ಮಾನ್ಯ ಅರಣ್ಯ ಚಿವರಾದ ಈಶ್ವರ್‌ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್‌ ಲಾಡ್‌, ಕನ್ನಡ, ಸಂಸ್ಕೃತಿ & ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್‌.ಕಿರಣ್‌ ಕುಮಾರ್‌, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್‌ ಸಂಪಾದಕರಾದ ರವಿ ಎಸ್‌. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago