ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.
ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.
15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.
ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.
ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…