ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ನಲುಗಿದ ಭಾರತ, ವಾಶಿಂಗ್ಟನ್ ಹೋರಾಟ ವ್ಯರ್ಥ!

ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.

ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.

15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.

 

ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.

ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

11 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

13 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

14 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

16 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

21 hours ago