ಸೆಪ್ಟೆಂಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಬಲಿಷ್ಠ ತಂಡ ಕಟ್ಟಲು ಮುಂದಾಗಿದ್ದು ಜನವರಿ 18 ರಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಏಕದಿನ ಹಾಗೂ ಟಿ-ಟ್ವೆಂಟಿ ಸರಣಿಗೆ ತಂಡವನ್ನು ಪ್ರಕಟಿಸಿದೆ.
ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ-ಟ್ವೆಂಟಿ ಸರಣಿಯನ್ನು ತನ್ನದಾಗಿಸಿಕೊಂಡಿದ್ದ ಭಾರತ ಮತ್ತೆ ಅದೇ ತಂಡವನ್ನು ಪ್ರಕಟಿಸಿದ್ದು ಇತ್ತೀಚೆಗೆ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ತ್ರಿಶತಕ ಸಿಡಿಸಿದ್ದ ಮುಂಬೈ ಬ್ಯಾಟ್ಸ್‌ಮನ್ ಪೃಥ್ವಿ ಶಾ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿದ್ದಾರೆ.
ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಸ್. ಭರತ್ ಹೊಸದಾಗಿ ಆಯ್ಕೆಯಾಗಿದ್ದು ತಂಡವನ್ನು ಸೇರಿಕೊಳ್ಳಲಿದ್ದಾರೆ. ಹಿರಿಯ ಆಟಗಾರರಾದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ ವೈಯಕ್ತಿಕ ಕಾರಣಗಳಿಂದಾಗಿ ಈ ಸರಣಿಗೆ ಲಭ್ಯರಾಗಿಲ್ಲ ಎಂದು ಬಿಸಿಸಿಐ ತಿಳಿಸಿದೆ.
ನ್ಯೂಜಿಲೆಂಡ್ ವಿರುದ್ಧ ಜನವರಿ 18 ರಿಂದ ಪಂದ್ಯಗಳು ಆರಂಭವಾಗಲಿದ್ದು ಮೊದಲ ಏಕದಿನ ಪಂದ್ಯ ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ಫೆಬ್ರುವರಿ 24 ಕ್ಕೆ ಕೊನೆಗೊಳ್ಳಲಿದೆ.
ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾಡ೯ರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಉಪ ನಾಯಕನಾಗಿ ಕನ್ನಡಿಗ ಕೆ. ಎಲ್. ರಾಹುಲ್ ವಾಪಸ್ ಆಗಿದ್ದು ಮೊದಲ ಎರಡು ಪಂದ್ಯಗಳಿಗೆ ಬಲಿಷ್ಠ ತಂಡ ಕಟ್ಟಲಾಗಿದೆ, ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಫಿಟ್ನೆಸ್ ಟೆಸ್ಟ್ ಪಾಸ್ ಆದರೆ ತಂಡವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಏಕದಿನ ತಂಡದ ವಿವರ :- ರೋಹಿತ್ ಶರ್ಮಾ ( ನಾಯಕ ) , ಶುಬ್ಮನ್ ಗಿಲ್ , ಇಶಾನ್ ಕಿಶನ್ , ವಿರಾಟ್ ಕೊಹ್ಲಿ , ಸುರ್ಯ ಕುಮಾರ್ , ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್ ) , ಹಾರ್ದಿಕ್ ಪಾಂಡ್ಯ ( ಉಪ ನಾಯಕ ) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಯುಜ್ವೇಂದ್ರ ಚಹಾಲ್ , ಕುಲದೀಪ್ ಯಾದವ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್.
ಟಿ-ಟ್ವೆಂಟಿ ತಂಡದ ವಿವರ: ಹಾರ್ದಿಕ್ ಪಾಂಡ್ಯ (ನಾಯಕ ) , ಸೂರ್ಯಕುಮಾರ್ ಯಾದವ್ ( ಉಪನಾಯಕ ) , ಇಶಾನ್ ಕಿಶನ್ ( ವಿಕೆಟ್ ಕೀಪರ್ ) , ದೀಪಕ್ ಹೂಡ , ರಾಹುಲ್ ತ್ರಿಪಾಠಿ , ರುತುರಾಜ್ ಗಾಯಕ್ವಾಡ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್ , ಕುಲದೀಪ್ ಯಾದವ್ , ಚಾಹಲ್ , ಅರ್ಶ್ದೀಪ್ ಸಿಂಗ್ , ಉಮ್ರಾನ್ ಮಲಿಕ್ , ಶಿವಂ ಮಾವಿ , ಪೃಥ್ವಿ ಶಾ , ಮುಕೇಶ್ ಕುಮಾರ್.
ಟೆಸ್ಟ್ ತಂಡದ ವಿವರ: ರೋಹಿತ್ ಶರ್ಮಾ (ನಾಯಕ ), ಕೆಎಲ್ ರಾಹುಲ್ (ಉಪ ನಾಯಕ ) , ಶುಭಮನ್ ಗಿಲ್, ಚತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ , ಕೆಎಸ್ ಭರತ್ (ವಿಕೆಟ್ ಕೀಪರ್ ) , ಇಶಾನ್ ಕಿಶನ್ (ವಿಕೆಟ್ ಕೀಪರ್ ) , ಆರ್ ಅಶ್ವಿನ್, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
View Comments
Cheers