ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆರಂಭಗೊಳ್ಳಲಿದೆ. ನ್ಯೂ ಇಯರ್ ಸಂಭ್ರಮಾಚರಣೆಗಳಲ್ಲಿ ಪಟಾಕಿ ನಿಷೇಧ ಮಾಡಿ ಪೊಲೀಸ್ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಡಿಸೆಂಬರ್ 31 ರಂದು ನಡೆಯುವ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ. ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ ಸೇರಿದಂತೆ ಕಾರ್ಯಕ್ರಮ ನಡೆಯುವ ಜಾಗಗಳಿಗೆ ಮಾರ್ಗಸೂಚಿ ಪ್ರಕಟವಾಗಿದೆ.
ಸುಮಾರು 19 ಅಂಶಗಳ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.
1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮಗಳನ್ನ ಪಾಲಿಸಬೇಕು.
2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು
3. ಕಡ್ಡಾಯವಾಗಿ ಧ್ವನಿವರ್ದಕ ಪರವಾನಿಗೆ ಪಡೆದುಕೊಂಡ ನಂತರ ನಿಗಧಿತ ಶಬ್ಧ ಮಿತಿ ಇರಬೇಕು.
ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
4. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
5. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು
6. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.
7. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.
8. ಮಾದಕ ವಸ್ತುಗಳ ಬಳಕೆ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು.
9. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್ ವಿರುದ್ಧ ಕೇಸ್.
10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.
11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು.
12. ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನ ನೇಮಿಸಬೇಕು.
13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು.
14. ಪಾರ್ಟಿ ವೇಳೆ ಇರುವ ಕೆಲಸ ಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‌ನೊಂದಿಗೆ ನೀಡಬೇಕು.
15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.
16. ಹೋಟೆಲ್‌ಗಳ ರೂಮ್‌ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.
17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.
18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು..
ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಬೆಂಗಳೂರು ಪೊಲೀಸರು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…