ನ್ಯೂ ಇಯರ್ ಸೆಲಬ್ರೇಷನ್: 19 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆರಂಭಗೊಳ್ಳಲಿದೆ. ನ್ಯೂ‌ ಇಯರ್ ಸಂಭ್ರಮಾಚರಣೆಗಳಲ್ಲಿ ಪಟಾಕಿ ನಿಷೇಧ ಮಾಡಿ ಪೊಲೀಸ್​ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡಿಸೆಂಬರ್ 31 ರಂದು ನಡೆಯುವ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ. ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ ಸೇರಿದಂತೆ ಕಾರ್ಯಕ್ರಮ ನಡೆಯುವ ಜಾಗಗಳಿಗೆ ಮಾರ್ಗಸೂಚಿ ಪ್ರಕಟವಾಗಿದೆ.

ಸುಮಾರು 19 ಅಂಶಗಳ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.

1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮಗಳನ್ನ ಪಾಲಿಸಬೇಕು.

2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು

3. ಕಡ್ಡಾಯವಾಗಿ ಧ್ವನಿವರ್ದಕ ಪರವಾನಿಗೆ ಪಡೆದುಕೊಂಡ ನಂತರ ನಿಗಧಿತ ಶಬ್ಧ ಮಿತಿ ಇರಬೇಕು.
ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

4. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.

5. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು

6. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.

7. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.

8. ಮಾದಕ ವಸ್ತುಗಳ ಬಳಕೆ‌ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು.

9. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್‌ ವಿರುದ್ಧ ಕೇಸ್.

10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.

11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು.

12. ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿಗಳನ್ನ ನೇಮಿಸಬೇಕು.

13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು.

14. ಪಾರ್ಟಿ ವೇಳೆ ಇರುವ ಕೆಲಸ ಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‌ನೊಂದಿಗೆ ನೀಡಬೇಕು.

15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.

16. ಹೋಟೆಲ್‌ಗಳ ರೂಮ್‌ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.

17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.

18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು..
ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಬೆಂಗಳೂರು ಪೊಲೀಸರು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

11 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

14 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

17 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

19 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

20 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago