ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 14ರ ಮಂಗಳವಾರ ಸಂಜೆ 5.30 ರಿಂದ 6.30ರ ಗೋಧೂಳಿ ಲಗ್ನದಲ್ಲಿ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಗೋ ಪೂಜೆ ನಡೆಸಬೇಕು ಎಂದು ಆದೇಶ ಪ್ರಕಟಿಸಲಾಗಿದೆ.
ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಗೋ ಪೂಜೆ ಮಾಡಬೇಕು ಎಂದು ಸೂಚಿಸಲಾಗಿದೆ.
ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಗೋ ಪೂಜೆ ಆಯೋಜಿಸಲಾಗುತ್ತಿದೆ.
ಗೋ ಪೂಜೆ ಕುರಿತು ಭಕ್ತಾದಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ದೇವಾಲಯದ ನೋಟಿಸ್ ಬೋರ್ಡ್‌ನಲ್ಲಿ ಮಾಹಿತಿ ನೀಡಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗೋ ಪೂಜೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಬೇಕು ಎಂದು ದೇವಾಲಯದ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.
ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ. ಗೋ ಪೂಜೆ ಮಾಡಲು ನಿಯಮಗಳು ಸಹ ಇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೋ ಪೂಜೆ ಮಾಡಲು ಆದೇಶ ಹೊರಡಿಸಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…