
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರಿಂದ ಕುಂದುಕೊರತೆಗಳ ಮನವಿ ಸ್ವೀಕರಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಜಾ ಸೇವಾ ಆಂದೋಲನ ಸಭೆಯು ಜಿಲ್ಲೆಯ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನವೆಂಬರ್ 21 ರ ಶನಿವಾರದಂದು ಆಯ್ದ ಸ್ಥಳಗಳಲ್ಲಿ ಆಯೋಜಿಸಲಾಗಿದೆ.
ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ, ಗಂಗವಾರ ಚೌಡಪ್ಪನಹಳ್ಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶಾಸಕ ಧೀರಜ್ ಮುನಿರಾಜ್ ಅವರ ಅಧ್ಯಕ್ಷತೆಯಲ್ಲಿ ದೊಡ್ಡಬಳ್ಳಾಪುರ ಟೌನ್, ಕಸಬಾ ಪಂಚಾಯಿತಿ ಕೋಡಿಗೆಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ಆವರಣ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.
ಹೊಸಕೋಟೆ ತಾಲೂಕಿನಲ್ಲಿ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಅನುಗೊಂಡನಹಳ್ಳಿ ಹೋಬಳಿ ಶಿವನಾಪುರ ಗಣಗಲ್ಲೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಆವರಣದಲ್ಲಿ ನಡೆಯಲಿದೆ.
ನೆಲಮಂಗಲ ತಾಲ್ಲೂಕಿನಲ್ಲಿ ಶಾಸಕರಾದ ಎನ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಸೋಂಪುರ ಹೋಬಳಿ ನೆಲಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯನ್ನ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಆಯಾ ತಾಲ್ಲೂಕು, ಹೋಬಳಿಯಲ್ಲಿ ಶನಿವಾರ ನಡೆಯಲಿರುವ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು ಕೊರತೆ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ತಿಳಿಸಿದ್ದಾರೆ.