ನ.26ಕ್ಕೆ ನಿಗದಿಯಾಗಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ- ಮತ್ತೊಂದು ತಾತ್ಕಾಲಿಕ ದಿನಾಂಕ‌ ನಿಗದಿ

ನವೆಂಬರ್ 26 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(K-SET) 2023 ಅನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಣೆ ಹೊರಡಿಸಿದೆ.

ಕಾರಣಾಂತರಗಳಿಂದ ಮುಂದೂಡಲ್ಪಟ್ಟಿರುವ ಈ ಪರೀಕ್ಷೆಯು ನಡೆಯುವ ದಿನಾಂಕವನ್ನು ತಾತ್ಕಾಲಿಕವಾಗಿ ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *