ನ.29ರಂದು ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಉಪಕೇಂದ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಮಜರಾಹೊಸಹಳ್ಳಿ, ದೊಡ್ಡತುಮಕೂರು ಮತ್ತು ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅಲ್ಲದೆ, ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್, ಭುವನೇಶ್ವರಿನಗರ, ತೇರಿನಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ, ಗುಡ್ಡದಹಳ್ಳಿ, ಮುತ್ತೂರು, ಸಿದ್ದೇನಾಯಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನಿಗದಿತ ಅವಧಿಯಲ್ಲಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!