ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುತ್ತಿರುವುದರ ವಿರುದ್ಧ ಬೇಸತ್ತು ಹಗಲಿನಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಿದರು.
ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡರು.
ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…