ಪಟಾಕಿ ಮಾರಾಟಕ್ಕೆ ಟಫ್ ರೂಲ್ಸ್: ನಗರದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಹಸಿರು ಪಟಾಕಿ ಮಾರಾಟದ ಅನುಮತಿ: ಷರತ್ತು ಉಲ್ಲಂಘಿಸಿದರೆ ಪರವಾನಗಿ ರದ್ದು

ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ‌ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಪಟಾಕಿ ಮಾರಾಟ ಪರವಾನಗಿದಾರರು ರಾತ್ರಿ ವೇಳೆ ಪಟಾಕಿ ಮಾರಬಾರದು, ಕಡ್ಡಾಯವಾಗಿ ಮಳಿಗೆಗಳಲ್ಲಿ ಅಗ್ನಿನಂದಕ ಸಿಲಿಂಡರ್ ಹೊಂದಿರಬೇಕು,‌ ನೀರಿನ ಟ್ಯಾಂಕರ್ ಸೇರಿದಂತೆ 15 ಮಾದರಿಯ ಕಟ್ಟುನಿಟ್ಟಿನ ಷರತ್ತುಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಅನುಮತಿ ಪತ್ರದಲ್ಲಿ ನಮೂದಿಸಲಾಗಿದೆ.

ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕಳೆದ 30 ವರ್ಷಗಳಿಂದ ಪಟಾಕಿ ವ್ಯಾಪಾರವನ್ನ ಮಾಡುತ್ತಾ ಬಂದಿದ್ದೇವೆ, ಸಾರ್ವಜನಿಕರು ಹಾಗೂ ಪರಿಸರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನ ಸರ್ಕಾರ ಜಾರಿ ಮಾಡಿದೆ. ಆ ನಿಯಮಗಳನ್ನು ಪಾಲನೆ ಮಾಡುತ್ತಾ ಪಟಾಕಿ ವ್ಯಾಪಾರ ಮಾಡುತ್ತಿದ್ದೇವೆ. ಸ್ಥಳದಲ್ಲಿ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ವಹಿಸಿದ್ದೇವೆ ಎಂದು ಪಟಾಕಿ ವ್ಯಾಪರಸ್ಥ ಮೋಹನ್ ಕುಮಾರ್ ತಿಳಿಸಿದರು.

ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.

ಪಟಾಕಿ ಚೀಟಿ ವ್ಯವಹಾರ ಮಾಡುವವರಿಂದ ಸರ್ಕಾರದಿಂದ ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಹೊಡೆತ ಬೀಳುತ್ತಿದೆ. ಅವರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಪರವಾನಗಿ ಇಲ್ಲದೇ ವ್ಯಾಪಾರ ಮಾಡುವವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ‌ಕೈಗೊಂಡು ಪರವಾನಗಿ ಪಡೆದು ವ್ಯಾಪಾರ ಮಾಡುವವರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಪಟಾಕಿ ಪರವಾನಗಿದಾರ ಮಹೇಶ್ ಬಾಬು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 hour ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago