ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ಕಂಡುಬಂದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಅಕ್ಟೋಬರ್ 31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಶಬರೀಶ್ ಎಂಬ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಕ್ಟೋಬರ್ 31ರಂದು ರಾತ್ರಿ ಪಾನಮತ್ತರಾಗಿ ಪಟಾಕಿ ಸಿಡಿಸುತ್ತಿದ್ದ ಯುವಕರು, ಪಟಾಕಿ ಹಚ್ಚುವಾಗ ಅದರ ಮೇಲೆ ಡಬ್ಬ ಇರಿಸಿ, ಆ ಡಬ್ಬದ ಮೇಲೆ ಕುಳಿತುಕೊಳ್ಳುವಂತೆ ಶಬರೀಶನಿಗೆ ಸವಾಲೆಸೆದಿದ್ದರು. ಮದ್ಯದ ಅಮಲಿನಲ್ಲಿದ್ದ ಶಬರೀಶ್, ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಂಡರೆ, ತನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿಕೊಂಡಾಗ ಸವಾಲನ್ನು ಸ್ವೀಕರಿಸಿ ಪಟಾಕಿ ಇದ್ದ ಡಬ್ಬದ ಮೇಲೆ ಕುಳಿತಿದ್ದಾನೆ.
ಅದರಂತೆ ಭಾರೀ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಹಚ್ಚಿದ್ದ ಆತನ ಸ್ನೇಹಿತರು, ಡಬ್ಬದ ಮೇಲೆ ಶಬರೀಶನನ್ನು ಕೂರಿಸಿ ಅಲ್ಲಿಂದ ದೂರ ಓಡಿದ್ದಾರೆ. ಬಳಿಕ ಪಟಾಕಿ ಸಿಡಿದ ರಭಸಕ್ಕೆ ಶಬರೀಶನ ಖಾಸಗಿ ಅಂಗಕ್ಕೆ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 2ರಂದು ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮಾಹಿತಿ ನೀಡಿದ್ದಾರೆ.
ಸ್ನೇಹಿತರು ಪಟಾಕಿ ಸಿಡಿಸುವ ಕಿಡಿಗೇಡಿ ಕೃತ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…