ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.
ನಗರದ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ್ಯ, ಸಾಮಾನ್ಯ ಜ್ಞಾನಗಳ ಮೇಲೆ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲ್ಯಗಳು ಬಹಳ ಮುಖ್ಯ ಎಂದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಜಿಯಾವುಲ್ಲಾಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದಕ್ಕೂ ಹಿಂಜರಿಯದೆ ಸಾಧನೆಗೆ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಮತ್ತು ಸಾಧನೆಗೆ ಎಲ್ಲಾ ತರಹದ ಸಹಕಾರವಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ,, ದೈಹಿಕ ಶಿಕ್ಷಣ ನಿರ್ದೇಶಕರಾದ ವಿ ಶ್ರೀನಿವಾಸ್, ಶಿಕ್ಷಕರಾದ ವಿಜಯಕುಮಾರ್, ಮಹಮ್ಮದ್ ಕೈಸರ್ ಪಾಷಾ, ದೇವರಾಜ್ ಮತ್ತಿತರರು ಹಾಜರಿದ್ದರು.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…