ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಗ್ರಾಪಂ ಬಾಲೇಪುರ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಖುದ್ದು ಪಡಿತರ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಿಸಿದರು.
ಫೆಬ್ರವರಿ ಮಾಹೆಯ ಬಾಕಿ 05 ಕೆ.ಜಿ ಹಾಗೂ ಮಾರ್ಚ್ ಮಾಹೆಯ ಪೂರ್ಣ 10 ಕೆ.ಜಿ ಅಕ್ಕಿ ಸೇರಿ ಒಟ್ಟು 15 ಕೆ.ಜಿ ಅಕ್ಕಿಯನ್ನು ಪ್ರತಿ ಫಲಾನುಭವಿಗೆ ವಿತರಿಸಲಾಗುತ್ತಿದೆ.
ಈ ವೇಳೆ ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ನ್ಯಾಯಬೆಲೆ ಅಂಗಡಿಯಲ್ಲಿ ವಿತರಣಾ ಪ್ರಕ್ರಿಯೆಯನ್ನು ಪರಿಶೀಲಿಸಿ, ಫಲಾನುಭವಿಗಳಿಗೆ ಅಕ್ಕಿ ವಿತರಣೆ ಮಾಡಿದೆ. ಆಹಾರ ಸಾಮಗ್ರಿಗಳು ಸುಗಮವಾಗಿ ಲಭ್ಯವಾಗುವಂತೆ ಮಾಡುವುದು ನಮ್ಮ ಪ್ರಾಥಮಿಕ ಗುರಿ ಎಂದರು.