ಪಡಿತರ ವಿತರಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ಪಡಿತರ ವಿತರಕರು ಕೆಲ ಸಮಸ್ಯೆಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತಿಳಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರಕಾರಿ ಪಡಿತರ ವಿತರಕರ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ನಾನು ಸಚಿವನಾದ ಮೇಲೆ ಪಡಿತರ ವಿತರಕರಿಗೆ ಸ್ವಲ್ಪಮಟ್ಟಿಗೆ ಸಹಾಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಹೆಚ್ಚಿನ ಬೇಡಿಕೆಯನ್ನು ರಾಜ್ಯಾಧ್ಯಕ್ಷ ಕೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದು ತಿಳಿಸಿದ್ದಾರೆ. ಜನ ಕೂಡ ಸಕ್ಕರೆ, ಬೇಳೆ ಬೇಕು ಎಂದು ಕೇಳಿದ್ದಾರೆ. ಅದರ ಪ್ರಸ್ತಾವನೆ ಸರಕಾರದ ಮುಂದಿದೆ. ಅದನ್ನು ಕೊಡುವ ಚಿಂತನೆ ಇದೆ. ವಿತರಕರು ಗ್ರಾಹಕರು ಮೆಚ್ಚುವಂತೆ ಕೆಲಸ ಮಾಡಿ ಎಲ್ಲರು ವಿದ್ಯಾವಂತರಿರುವುದಿಲ್ಲ. ಆಹಾರ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿ ನಿಮ್ಮ ಕಷ್ಟಸುಕಗಳಿಗೆ ಸ್ಪಂದಿಸುತ್ತೇವೆ. ಗ್ರಾಕರಿಂದ ಯಾವುದೇ ದೂರು ಬರದಂತೆ ವಿತರಣೆ ಮಾಡಿ. ಗುಣಮಟ್ಟದ ರಾಗಿ ಜೋಳ ಶುದ್ದೀಕರಿಸಿ ನೀಡಲು ಅಧಿಕಾರಿಗಳೊಂದಿಗೆ ಸಭೆ ಮಾಡಿ ಕ್ರಮವಹಿಸಲಾಗಿದೆ. ವಿತರಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸರಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಮಾತನಾಡಿ ಉಚಿತ ಭಾಗ್ಯಗಳಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಅನ್ನ ಭಾಗ್ಯ ಯೋಜನೆಯನ್ನು ಸಮಾಜದ ಯಾವ ವ್ಯಕ್ತಿಯು ಸಹ ಹಸಿವಿನಿಂದ ಇರಬಾರದೆಂಬ ಸರ್ಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ವಿ.ಎಸ್.ಎಸ್.ಎನ್. ಕಾರ್ಯದರ್ಶಿಗಳು ಹಲವು ನ್ಯಾಯಯುತ ಬೇಡಿಕೆಗಳಾದ ನ್ಯಾಯಬೆಲೆ ಅಂಗಡಿಗಳನ್ನು ನಿರ್ವಹಿಸುತ್ತಿರುವ ನಮಗೆ ಕ್ವಿಂಟಾಲಿಗೆ 50 ರೂಪಾಯಿ ನೀಡುತ್ತಿದ್ದು ಕ್ವಿಂಟಾಲಿಗೆ ಕಮಿಷನ್ 300 ಗಳಿಗೆ ಏರಿಸಬೇಕು, ಅಹಾರ ಭದ್ರಾತಾ ಯೋಜನೆಯಿಂದ ವಂಚಿತರಾಗುತ್ತಿರುವ ಒಬ್ಬರು ಇಬ್ಬರು ವಯಸ್ಸಾದವರು, ಅಂಗವಿಕಲರು, ರೋಗಿಗಳಿಗೆ ಆಹಾರ ಧಾನ್ಯ ತೆಗೆದು ಕೊಳ್ಳಲು ಕಾರ್ಡುಗಳಿಗೆ ವಿನಾಯಿತಿ ನೀಡಬೇಕು ಅಥವಾ ಓ.ಟಿ.ಪಿ ಮುಖಾಂತರ ಆಹಾರ ಧಾನ್ಯ ನೀಡಲು ಅವಕಾಶ ನೀಡಬೇಕು, ಇ ಕೆ.ವೈ.ಸಿ ಮಾಡಿದ ಹಣ 5 ವರ್ಷಗಳಿಂದ ಬಾಕಿ ಇದ್ದು ಈ ಹಣವನ್ನು ಬಿಡುಗಡೆ ಮಾಡಿಸಿ ಕೊಡಬೇಕು. ಸರ್ವರ್ ಸಮಸ್ಯೆ ಸರಿ ಪಡಿಸಿ ಕೊಡಬೇಕು. ವಿತರಣೆ ಸಮಯದಲ್ಲಿ ದಾಸ್ತಾನು ಮುಗಿದ ನಂತರ ವಿತರಣೆ ಮಾಡಲು ಅಗದಂತೆ ಸಾಫ್ಟ್ವೇರ್ ಆಫ್‌ಡೇಟ್ ಮಾಡಬೇಕು. ಸಗಟು ಮಳಿಗೆಯಲ್ಲಿ ಎಲೆಟ್ರಾನಿಕ್ ಯಂತ್ರ ಇಟ್ಟು ಅಲ್ಲೆ ತೂಕ ಮಾಡಿ ಕೊಡಬೇಕು ಎಂದು ಸಗಟು ಮಳಿಗೆಯವರಿಗೆ ನಿರ್ದೇಶನ ನೀಡಬೇಕು. ಪ್ರತಿ ತಿಂಗಳು ವಿತರಣೆ ಮುಗಿದ ನಂತರ ಆಯಾ ತಿಂಗಳ ಕಮೀಷನ್ ಹಣವನ್ನು ಡಿ.ಬಿ.ಟಿ ಮುಖಾಂತರ ಅಯಾ ತಿಂಗಳಲ್ಲೇ ನೀಡಬೇಕು ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ ಕೊಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ 5ನೇ ಹಣಕಾಸು ಆಯೋಗದಾ ಅಧ್ಯಕ್ಷ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ತಾಲೂಕು ಅಧ್ಯಕ್ಷ ಸಿ.ಎಸ್.ರಾಜಣ್ಣ, ವೆಂಕಟೇಶಪ್ಪ, ಸಂಘದ ಪದಾಧಿಕಾರಿಗಳು ತಾಲೂಕಿನ ಮುಖಂಡರು ಇದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago