Oplus_131072
ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆನ್ನಾಗರ ನಿವಾಸಿ ಶಂಕರ್(28) ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.
ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.
ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.
ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…