ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗಿಡಗಾನಹಳ್ಳಿ ಗ್ರಾಮದ ಪವಿತ್ರ (34) ಕೊಲೆಯಾದ ಗೃಹಿಣಿಯಾಗಿದ್ದು, ಪತಿ ವೆಂಕಟೇಶ್ ಕೊಲೆ ನಡೆಸಿರುವ ಆರೋಪ ಕೇಳಿಬಂದಿದೆ.

2011ರಲ್ಲಿ ವಿವಾಹವಾಗಿದ್ದ ದಂಪತಿಗೆ ಮೂವರು ಹೆಣ್ಣುಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪತ್ನಿಯ ಶೀಲದ ಬಗ್ಗೆ ಅನುಮಾನ ಪಡುತ್ತಿದ್ದ ವೆಂಕಟೇಶ್, ಹಣದ ವಿಚಾರಕ್ಕೂ ಪತ್ನಿಯೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಕುಟುಂಬದವರ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಲವು ಬಾರಿ ರಾಜಿ ಪಂಚಾಯಿತಿಗಳು ನಡೆದಿದ್ದರೂ ದಂಪತಿ ನಡುವಿನ ಕಲಹ ಮುಂದುವರಿದಿತ್ತು ಎಂದು ತಿಳಿದುಬಂದಿದೆ.

ಅಂತಿಮವಾಗಿ ಇದೇ ವೈಮನಸ್ಸು ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನ ಹಾಗೂ ಘಟನೆಯ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

40 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago