ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಗುರುವಾರ ತನ್ನ ಪತ್ನಿಯ ಕತ್ತರಿಸಿದ ತಲೆಯೊಂದಿಗೆ ಸಾರ್ವಜನಿಕವಾಗಿ ತಿರುಗಾಡುತ್ತಿದ್ದನು. ಈ ಭೀಕರ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿದ್ದಾರೆ.
ಒಂದು ಕೈಯಲ್ಲಿ ಕತ್ತರಿಸಿದ ತಲೆ ಮತ್ತು ಇನ್ನೊಂದು ಕೈಯಲ್ಲಿ ಚಾಕು ಹಿಡಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ಅರೊಪಿಯನ್ನ ಬಂಧಿಸುವವರೆಗೂ ನೂರಾರು ಪ್ರಯಾಣಿಕರು ಈ ಭಯಾನಕ ದೃಶ್ಯವನ್ನು ವೀಕ್ಷಿಸಿದರು.
ಎಂಟು ವರ್ಷಗಳ ಹಿಂದೆ ಸಂತ್ರಸ್ತೆಯನ್ನು ಮದುವೆಯಾಗಿದ್ದ ಆರೋಪಿ ಅನಿಲ್, ಆದರೆ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆಕೆಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿ ಆಕೆಯ ತಲೆ ಕಡಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ.