ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು ಮಾದರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಮಾಧ್ಯಮಗಳ ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಸುದ್ದಿಗಳಲ್ಲಿ ಊಹಾ ಪತ್ರಿಕೋದ್ಯಮ ಕಾಣುತ್ತದೆ, ಅದು ಆಗಬಾರದು. ಸತ್ಯ – ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.
ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು.
ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಬ್ರೇಕಿಂಗ್ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ ಎಂದು ತಿಳಿಸಿದರು.
ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.
ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ. ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…