ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು- ಸಿಎಂ ಸಿದ್ದರಾಮಯ್ಯ

ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು ಮಾದರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಮಾಧ್ಯಮಗಳ ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಸುದ್ದಿಗಳಲ್ಲಿ ಊಹಾ ಪತ್ರಿಕೋದ್ಯಮ ಕಾಣುತ್ತದೆ, ಅದು ಆಗಬಾರದು. ಸತ್ಯ – ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು.

ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಬ್ರೇಕಿಂಗ್ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ ಎಂದು ತಿಳಿಸಿದರು.

ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.

ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ. ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

4 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

7 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

9 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

22 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago