ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಭವನ ನಿರ್ಮಾಣ ಮಾಡುವುದು ಮತ್ತು ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮುಖ್ಯ ಗುರಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್.ಡಿ. ಉಪ್ಪಾರ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ ಎಸ್ ಘಾಟಿ ಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕು ಪತ್ರಕರ್ತರಲ್ಲಿ ಸಮನ್ವಯತೆ ಕೊರತೆ ಇದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಣಿಕವಾಗಿ ಸಂಘದ ಏಳ್ಗೆಗಾಗಿ ದುಡಿಯುತ್ತೇನೆ ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ.ಶ್ರೀನಿವಾಸ ಮಾತನಾಡಿ, ಪತ್ರಕರ್ತರು ನೈಜ ಸುದ್ದಿಯನ್ನು ಪ್ರಕಟಿಸಬೇಕು ಸತ್ಯಾಸತ್ಯತೆಯನ್ನು ಅರಿತು ಸುದ್ದಿಗಳನ್ನು ಮಾಡಬೇಕು. 93 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಒಗ್ಗಟ್ಟಾಗಿ ಸಂಘದ ನಿವೇಶನ ಮತ್ತು ಪತ್ರಕರ್ತರ ಭವನ ನಿರ್ಮಾಣಕ್ಕೆ ಶ್ರಮಿಸಲು ಮನವಿ ಮಾಡಿ, ನೂತನ ಸಾಲಿಗೆ ಆಯ್ಕೆಯಾದ ಪದಾದಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಆರ್.ರಮೇಶ್, ಜಿಲ್ಲಾ ಖಜಾಂಚಿ ಶಾಂತಮೂರ್ತಿ, ಉಪಾಧ್ಯಕ್ಷ ಮುರಳಿ ಮೋಹನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಆರ್ ಸತೀಶ್, ನಾಮಿನಿ ಸದಸ್ಯ ಬಿ.ರಮೇಶ್, ಹೊಸಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮಂಜುನಾಥ್ ಮತ್ತು ಪತ್ರಕರ್ತರು ಭಾಗವಹಿಸಿದ್ದರು.
ನೂತನ ಸಾಲಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಅನೇಕ ಕನ್ನಡ ಪರ ಹಾಗೂ ಇನ್ನಿತರ ಎಲ್ಲಾ ಸಂಘಟನೆಯ ಮುಖಂಡರುಗಳು ರಾಜಕಾರಣಿಗಳು ಶುಭ ಹಾರೈಸಿದರು.