ಪ್ರಜಾಬಿಂಬ ವೆಬ್ ಪೋರ್ಟಲ್ ನ ಸಂಪಾದಕರು ಮತ್ತು ಪತ್ರಕರ್ತರಾದ ಚಂದ್ರಪ್ಪ ಅವರ ತಾಯಿ ಪಿಳ್ಳಹನುಮಕ್ಕ(70), ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಸಂಜೆ ನಿಧನರಾಗಿದ್ದಾರೆ,
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ.
ಮೃತರು ಪತಿ, ಇಬ್ಬರು ಪುತ್ರಿಯರು ಮತ್ತು ಮೂವರು ಗಂಡು ಮಕ್ಕಳನ್ನ ಅಗಲಿದ್ದಾರೆ, ಮೃತರ ಅಂತ್ಯ ಸಂಸ್ಕಾರ ನಾಳೆ ದೊಡ್ಡಬಳ್ಳಾಪುರ ತಾಲೂಕಿನ ಸ್ವಗ್ರಾಮವಾದ ಲಕ್ಷ್ಮೀದೇವಪುರದಲ್ಲಿ ನೆರವೇರಲಿದೆ.
ಮೃತರ ಸಾವಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಬಳಗ ಕಂಪನಿ ಮಿಡಿದಿದೆ..