ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಮಾನವಹಕ್ಕುಗಳ ಕುರಿತ ಪ್ರಬಂಧ ಸ್ಪರ್ಧೆ

ದೊಡ್ಡಬಳ್ಳಾಪುರ : ಭಾರತ ಸಂವಿಧಾನ ಸಮರ್ಪಣಾ ದಿನ ಮತ್ತು ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕರ್ನಾಟಕ ಜ್ಞಾನ-ವಿಜ್ಞಾನ ಸಮಿತಿಯು ದಿನಾಂಕ: 6/12/2025 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ದೊಡ್ಡಬಳ್ಳಾಪುರ ನಗರದಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ತೂಬಗೆರೆ ಷರೀಫ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಪ್ರತಿ ಪದವಿ ಪೂರ್ವ ಕಾಲೇಜಿನಿಂದ ಇಬ್ಬರು(2) ವಿಧ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದು ಅನುಮತಿ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿವರಗಳು

ಸ್ಪರ್ಧೆಯ ದಿನ (ಡಿ.6) ಒಂದು ಗಂಟೆ ಮುಂಚಿತವಾಗಿ ತಮ್ಮ ಕಾಲೇಜಿನ ಮುಖ್ಯಸ್ಥರು/ಪ್ರಾಂಶುಪಾಲರಿಂದ ದೃಢೀಕರಣ ಪತ್ರದೊಂದಿಗೆ ಕಾಲೇಜು ನೀಡಿರುವ ಗುರುತಿನ ಚೀಟಿಯೊಂದಿಗೆ ಪ್ರಬಂಧ ಸ್ಪರ್ಧೆ ನಡೆಯುವ ಸ್ಥಳಕ್ಕೆ ಆಗಮಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು

ಬಹುಮಾನ

ಪ್ರಥಮ ಬಹುಮಾನವಾಗಿ
ರೂ 5000 ಸಾವಿರ

ದ್ವಿತೀಯ ಬಹುಮಾನ – ರೂ. 3000 ಸಾವಿರ

ತೃತೀಯ ರೂ. 2000 ಸಾವಿರ ಹಾಗೂ ಐದು ಸಮಾಧಾನಕರ ತಲಾ 1000 ರೂಗಳ
ಬಹುಮಾನಗಳೊಂದಿಗೆ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.

ವಿಜೇತರಿಗೆ ದಿನಾಂಕ 10/12/2025 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ದೊಡ್ಡಬಳ್ಳಾಪುರ ನಗರದಲ್ಲಿರುವ ಕನ್ನಡ ಜಾಗೃತ ಭವನದಲ್ಲಿ ನಡೆಯಲಿರುವ ಸಂವಿಧಾನ ಸಮರ್ಪಣಾ ದಿನ ಹಾಗೂ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಬಹುಮಾನವನ್ನು ವಿತರಿಸಲಾಗುವುದು.

ಪ್ರಬಂಧದ ವಿಷಯ

ಭಾರತ ಸಂವಿಧಾನದ ಮಹತ್ವ, ಲಕ್ಷಣಗಳು ಮತ್ತು ಮೂಲಭೂತ ಹಕ್ಕುಗಳು.

ನಿಬಂಧನೆಗಳು:-

1. ಕಾಲೇಜು ಮುಖ್ಯಸ್ಥರ/ಪ್ರಾಂಶುಪಾಲರ ದೃಢೀಕರಣ ಪತ್ರ ಹಾಗೂ ವಿಧ್ಯಾರ್ಥಿಗಳ ಗುರುತಿನ ಚೀಟಿ ಕಡ್ಡಾಯವಾಗಿ ತರತಕ್ಕದ್ದು.

2. ಪ್ರಬಂಧವು 10 ಪುಟಗಳು ಮೀರದಂತಿರಬೇಕು.

3. ಪರೀಕ್ಷಾ ಕೊಠಡಿಯೊಳಗೆ 15 ನಿಮಿಷ ಮುಂಚಿತವಾಗಿ ಹಾಜರಿರತಕ್ಕದ್ದು.

4. ಪರೀಕ್ಷಾ ಕೊಠಡಿಯೊಳಗೆ ಪೇಪರ್ ಮತ್ತು ಪೆನ್ನು ತರುವಂತಿಲ್ಲ.

5. ನಿಮ್ಮ ಬ್ಯಾಗು, ಲಗೇಜು, ಹಾಗೂ ಮೊಬೈಲ್ ಕೊಠಡಿಯೊಳಗೆ ತರುವಂತಿಲ್ಲ.

6. ಪ್ರಬಂಧ ಸ್ಪರ್ಧೆಯ ಸಮಯದ ಮಧ್ಯೆ ಯಾರೂ ಎದ್ದು ಹೋಗುವಂತಿಲ್ಲ.

7. ಭಾಗವಹಿಸುವ ವಿಧ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಹೋಗತಕ್ಕದ್ದು.

ಪ್ರಬಂಧ ಸ್ಪರ್ಧೆ ಮುಗಿದ ನಂತರ ವಿದ್ಯಾರ್ಥಿಗಳಿಗೆ ಲಘು ಉಪಹಾರದ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ

ತೂಬಗೆರೆಷರೀಫ್ 9343717770
ರಾಜುಸಣ್ಣಕ್ಕಿ 9986573503 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಸೂಚಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

4 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

5 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

16 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

19 hours ago