ಪದ್ಮಶ್ರೀ ಪಿ.ಮುನಿವೆಂಕಟಪ್ಪ ಅವರಿಗೆ ಬೆಂ. ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್: ಸ್ವತಃ ಪಿ.ಮುನಿವೆಂಕಟಪ್ಪರವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ವಿಶ್ವವಿದ್ಯಾಲಯದ ಕುಲಪತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

ಪಿಂಡಿಪಾಪನಹಳ್ಳಿ‌ ಮುನಿವೆಂಕಟಪ್ಪ ಅವರು ಕಲಾ ಕ್ಷೇತ್ರದ ಸಲ್ಲಿಸಿದ ಸೇವೆಗಾಗಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಿದೆ.

ಸ್ವತಃ ವಿಶ್ವವಿದ್ಯಾಲಯದ ಕುಲಪತಿಗಳು ಮುನಿವೆಂಕಟಪ್ಪ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ ಪ್ರೊ.ನಿರಂಜನ ಅವರು, ನಮ್ಮ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿನ ತಮ್ಮ ಕೊಡುಗೆಗಾಗಿ ತಮ್ಮನ್ನು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಬೇಕೆ೦ದು ವಿಶ್ವವಿದ್ಯಾಲಯವು ನಿರ್ಧರಿಸಿದ್ದು, ನಮ್ಮ ಪ್ರಸ್ತಾವನೆಗೆ ಕುಲಾಧಿಪತಿಗಳಾದ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಘಟಿಕೋತ್ಸವವು ಜುಲೈ.4 ಬೆಳಿಗ್ಗೆ 10-30ಕ್ಕೆ ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ. ತಾವು ಬಂದು ಗೌರವವನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.

ಈ ಸಂದರ್ಭದಲ್ಲಿ ಪ್ರೊಫೆಸರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

1 hour ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

2 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

10 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

16 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago