ಪಬ್ಲಿಕ್ ಮಿರ್ಚಿ ಇಂಪ್ಯಾಕ್ಟ್: ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ಅಂಗನವಾಡಿ ಕೇಂದ್ರದ ಆವರಣ ಸ್ವಚ್ಛತೆ

ನಗರದ ತಾಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಸ್ಥಳೀಯರು ಬಯಲು ಶೌಚಾಲಯವಾಗಿ ಬಳಕೆ‌ ಮಾಡಿಕೊಳ್ಳುತ್ತಿರುವ ಬಗ್ಗೆ ‘ಪಬ್ಲಿಕ್ ಮಿರ್ಚಿ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ನಗರಸಭೆ ಆಡಳಿತ ಕೂಡಲೇ ಸಿಬ್ಬಂದಿಯಿಂದ ಅಂಗನವಾಡಿ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.

ಈ ಕುರಿತು ಮಾತನಾಡಿದ್ದ ಅಂಗನವಾಡಿ ಕಾರ್ಯಕರ್ತೆ ಚಿನ್ನಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಟ್ಟದ ಸುತ್ತಲೂ ಇಲ್ಲಿನ ಸ್ಥಳೀಯರು ಬೆಳಗ್ಗೆ ಮತ್ತು ಸಂಜೆ ವೇಳೆ ಬಂದು ಗಲೀಜು ಮಾಡಿ ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಂಡಿದ್ದರು.

ಎಚ್ಚೆತ್ತ ನಗರಸಭೆ ಅಧಿಕಾರಿಗಳು ಇಂದು‌ ಬೆಳಿಗ್ಗೆ ತಾಲ್ಲೂಕು ಕಚೇರಿ ಆವರಣದಲ್ಲಿರುವ ಅಂಗನವಾಡಿ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.

Leave a Reply

Your email address will not be published. Required fields are marked *