ನಗರದ ತಾಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಸ್ಥಳೀಯರು ಬಯಲು ಶೌಚಾಲಯವಾಗಿ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ‘ಪಬ್ಲಿಕ್ ಮಿರ್ಚಿ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ನಗರಸಭೆ ಆಡಳಿತ ಕೂಡಲೇ ಸಿಬ್ಬಂದಿಯಿಂದ ಅಂಗನವಾಡಿ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.
ಈ ಕುರಿತು ಮಾತನಾಡಿದ್ದ ಅಂಗನವಾಡಿ ಕಾರ್ಯಕರ್ತೆ ಚಿನ್ನಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಟ್ಟದ ಸುತ್ತಲೂ ಇಲ್ಲಿನ ಸ್ಥಳೀಯರು ಬೆಳಗ್ಗೆ ಮತ್ತು ಸಂಜೆ ವೇಳೆ ಬಂದು ಗಲೀಜು ಮಾಡಿ ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಂಡಿದ್ದರು.
ಎಚ್ಚೆತ್ತ ನಗರಸಭೆ ಅಧಿಕಾರಿಗಳು ಇಂದು ಬೆಳಿಗ್ಗೆ ತಾಲ್ಲೂಕು ಕಚೇರಿ ಆವರಣದಲ್ಲಿರುವ ಅಂಗನವಾಡಿ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…