ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಿಸುವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಲಾಗಿತ್ತು. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳಿಗೆ ಒಂದು ತಿಂಗಳಿಂದ ರಿಚಾಜ್೯ ಮಾಡದೇ ಇರುವ ಪರಿಣಾಮ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಈ ಕುರಿತು ಮೇ.6ರಂದು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಪ.ಪಂ ಸೂಕ್ತ ಕ್ರಮಕೈಗೊಂಡಿದೆ.
ಖಾಸಗಿಯವರಿಗೆ ನೀಡಿದ್ದ ನಿರ್ವಹಣಾ ಜವಾಬ್ದಾರಿಯನ್ನು ಹಿಂಪಡೆದು ಪಟ್ಟಣ ಪಂಚಾಯಿತಿಯೇ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಜವಾಬ್ದಾರಿ ಹೊತ್ತಿದೆ..
ಪಬ್ಲಿಕ್ ಮಿರ್ಚಿ ವರದಿಗಾರಿಕೆಗೆ ಕಸುವನಹಳ್ಳಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..
ಈ ಕುರಿತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯ ಆಡಳಿತಾಧಿಕಾರಿ ನರಸಿಂಹ ಮೂರ್ತಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿಯವರಿಗೆ ನೀಡಲಾಗಿತ್ತು. ಅವರು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದ ಹಿನ್ನೆಲೆ ಅವರ ಬದಲಿಗೆ ಇದೀಗ ನಾವೇ ನಿರ್ವಹಣೆ ಮಾಡುತ್ತಿದ್ದೇವೆ. ಕಾರ್ಡ್ ರಿಚಾರ್ಜ್, ಕಾಯಿನ್ ವ್ಯವಸ್ಥೆಯಿಂದ ನೀರು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಜನರ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ರಿಚಾರ್ಜ್ ಮಾಡಿಕೊಳ್ಳಲು ಸ್ಕ್ಯಾನರ್ ಸ್ಥಳದಲ್ಲಿ ಅಂಟಿಸಲಾಗಿದೆ. ಒಂದು ವೇಳೆ ರಿಚಾರ್ಜ್ ಮಾಡಿಕೊಳ್ಳಲು ಬರದಿದ್ದಲ್ಲಿ ವಾಟರ್ ಮೆನ್ ಸಹಾಯ ಪಡೆಯಬಹುದಾಗಿದೆ ಎಂದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…