ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿತ್ತು. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ ದುರ್ನಾತ ಬೀರುತ್ತಿತ್ತು. ಸೊಳ್ಳೆ, ನೊಣ ಸೇರಿದಂತೆ ಇತರೆ ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿತ್ತು. ಇದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿತ್ತು. ಅದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಶುಚಿತ್ವದತ್ತ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿ ಪ್ರತಿಭಟನೆ ಮಾಡಿ ಪಂಚಾಯಿತಿ ವಿರುದ್ಧ ದಿಕ್ಕಾರ ಕೂಗಿದ್ದರು. ಈ ಕುರಿತು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು….
“ಪಬ್ಲಿಕ್ ಮಿರ್ಚಿ” ವರದಿ ಹಾಗೂ ನಿವಾಸಿಗಳ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ, ಜನಪ್ರತಿನಿಧಿಗಳು ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ….
ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಂಚಾಯಿತಿ ವಿರುದ್ಧ ದಲಿತರು ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆ 15ನೇ ಹಣಕಾಸು ಅನುದಾನದಡಿಯಲ್ಲಿ 2ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಪಂಚಾಯಿತಿ ಮೂಲಗಳು ತಿಳಿಸಿವೆ…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…