ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ಮಲ್ಲಾತಹಳ್ಳಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ ವಿಚಾರ: ಗ್ರಾಮಕ್ಕೆ ಡಿವೈಎಸ್ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

ತಾಲೂಕಿನ ಮಲ್ಲಾತಹಳ್ಳಿ ಗ್ರಾಮದಲ್ಲಿ ದಲಿತರಿಗೆ ದೇವಾಲಯಕ್ಕೆ ಬಿಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಇಂದು ಗ್ರಾಮಕ್ಕೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಬಹಳ ಹಿಂದಿನಿಂದ ಮಲ್ಲಾತಹಳ್ಳಿ ಗ್ರಾಮದಲ್ಲಿ ಸವರ್ಣಿಯರು ಅಸ್ಪೃಶ್ಯತೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಹಳೆ ತಲೆಮಾರಿನ ದಲಿತರು ಇದ್ಯಾವುದನ್ನು ಪ್ರಶ್ನೆ ಮಾಡದೆ ತಮ್ಮ ಮೇಲಿನ ದೌರ್ಜನ್ಯಗಳನ್ನ ಸಹಿಸಿಕೊಂಡಿದ್ದರು. ಆದರೆ ಇವತ್ತಿನ ವಿದ್ಯಾವಂತ ಹುಡುಗರು ದಲಿತರ ಮೇಲೆ ನಡೆಸುತ್ತಿರುವ ಅಸ್ಪೃಶ್ಯತೆ ಆಚರಣೆಯನ್ನ ಪಶ್ನೆ ಮಾಡಲು ಪ್ರಾರಂಭಿಸಿದ್ದಾರೆ.

ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ಪರಿಶೀಲನೆ ನಡೆಸಿದ ನಂತರ ನಾಳೆ ಪೂಜಾರಿಯನ್ನು ಕರೆಸಿ, ಪೂಜೆ ಮಾಡಿಸಿ ಎಲ್ಲರಿಗೂ ಒಳಗೆ ಹೋಗಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!