ಮಾ.28ರಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ ಎಂದು “ಪಬ್ಲಿಕ್ ಮಿರ್ಚಿ” ನ್ಯೂಸ್ ವೆಬ್ ಸೈಟ್ ವರದಿ ಮಾಡಲಾಗಿತ್ತು. “ಪಬ್ಲಿಕ್ ಮಿರ್ಚಿ” ವರದಿ ಪರಿಣಾಮ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿದ್ದಾರೆ.
ಓವರ್ ಹೆಡ್ ಟ್ಯಾಂಕ್ ಸ್ವಚ್ಛಗೊಂಡ ಹಿನ್ನೆಲೆ ಊರಿನ ಗ್ರಾಮಸ್ಥರು “ಪಬ್ಲಿಕ್ ಮಿರ್ಚಿ” ಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಗೂ ಅಧಿಕಾರಿಗಳ ಸ್ಪಂದನೆಗೆ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದರು. ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದೀಗ ಓವರ್ ಹೆಡ್ ಟ್ಯಾಂಕ್ ಸ್ವಚ್ಛವಾಗಿರುವ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎನ್. ಮುನಿರಾಜು ಅವರು ಪಬ್ಲಿಕ್ ಮಿರ್ಚಿಗೆ ತಿಳಿಸಿದ್ದಾರೆ.