ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,
ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.
ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…