ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು: 10 ಲಕ್ಷ ಮೌಲ್ಯದ ಸ್ಫೋಟಕ ವಸ್ತುಗಳ ವಶ: ಏಳು ಮಂದಿ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು ಮಾಡಿದ್ದ ಸ್ಥಳದ ಮೇಲೆ ಕ್ರಮ ಕೈಗೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕೊಡಿಗೆಹಳ್ಳಿ ಗ್ರಾಮದ ಕೆಂಪೇಗೌಡ ಎಂಬುವವರ ಜಮೀನಿನಲ್ಲಿರುವ ಎರಡು ಕೊಠಡಿಗಳಲ್ಲಿ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು ಮಾಡಲಾಗಿತ್ತು ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಒಟ್ಟು 52 ಬಾಕ್ಸ್‌ಗಳಷ್ಟು ಪಟಾಕಿಗಳು ಸೇರಿದಂತೆ ದಾಸ್ತಾನು ಮಾಡಿದ್ದ ಪಟಾಕಿ ಬಾಕ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಪಟಾಕಿಗಳ ಅಂದಾಜು ಮೌಲ್ಯ ಸುಮಾರು 10 ಲಕ್ಷ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ, ಮಹೇಶ್, ಇಕ್ಬಾಲ್, ಆಯುಬ್ ಪಾಷಾ, ನವೀನ್ ಕುಮಾರ್, ಶಿವಕುಮಾರ್ ಹಾಗೂ ರವಿ ಕುಮಾರ್ ಎಂಬುವವರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ವೀರಾಪುರ ರಸ್ತೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಎದುರಿನ ನಿರ್ಜನ‌ ಪ್ರದೇಶದಲ್ಲಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ…

7 minutes ago

ಫಾಕ್ಸ್‌ಕಾನ್ ಕಂಪನಿ ಬಸ್‌– ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ: ಮಕ್ಕಳು ಪಾರು

ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…

1 hour ago

ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ…

2 hours ago

ಎಮ್ಮೆ, ಹಸು, ದನ, ಕುರಿ, ಮೇಕೆ ಕಾಯುತ್ತಾ….

ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ…

2 hours ago

ಕರ್ನಾಟಕದಲ್ಲಿ ಮಂಜಿನ ಮುಸುಕು; ಎಲ್ ನೀನೋ ಪ್ರಭಾವದಿಂದ ಚಳಿ ಕಡಿಮೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಆರಂಭದ ಸೂಚನೆಗಳು ಕಾಣಿಸತೊಡಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು…

3 hours ago

ಉಜ್ಜಿನಿ ಗ್ರಾಮದಲ್ಲಿ ಎರಡು ಚಿರತೆಗಳ ಪ್ರತ್ಯಕ್ಷ ವಿಚಾರ: ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ…

13 hours ago