ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ, ಮಾತನಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದರಿಂದ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗಿದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಹೇಳಿದರು.

ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು ಎಂದು ತಿಳಿಸಿದರು.

ಇಂದು ಜಾತಿ – ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್.ಸಿ , ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

11 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

12 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

12 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

15 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

2 days ago