ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಅನುದಾನ ದುರ್ಬಳಕೆಯಾಗಿಲ್ಲ : ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಸಂಪೂರ್ಣ ತಪ್ಪು ಕಲ್ಪನೆ. ಕಾಯ್ದೆಯ ಚೌಕಟ್ಟಿನಲ್ಲೇ ಅನುದಾನ ಬಳಕೆಯಾಗುತ್ತಿದೆ ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಯುಕ್ತ ಸಮತಾ ವೇದಿಕೆ ಆಯೋಜಿಸಿದ್ದ ಚಿಂತನ ಮಂಥನ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಸ್ ಸಿಪಿ ಮತ್ತು ಟಿಎಸ್ಪಿ ಕಾರ್ಯಕ್ರಮ ಘೋಷಣೆಯಾಗಿ 12 ವರ್ಷಗಳಾಗಿವೆ. ಈ ಹಿಂದಿನ ಬಿಜೆಪಿ ಸರ್ಕಾರ ಐದು ವರ್ಷಗಳ ಕಾಲ ಈ ಅನುದಾನವನ್ನು ಹೇಗೆ ಮತ್ತು ಎಲ್ಲಿ ಬಳಸಿದರು ಎಂಬುದನ್ನು ಮೊದಲು ಪರಿಶೀಲಿಸಬೇಕು. ನಾವು ಕಾಯ್ದೆ ಚೌಕಟ್ಟಿನಲ್ಲಿಯೇ ಅನುದಾನವನ್ನು ಸರ್ಕಾರಿ ಯೋಜನೆಗಳಿಗೆ ಬಳಸಿದ್ದೇವೆ ಎಂದು ತಿಳಿಸಿದರು.

ಎಥೆನಾಲ್ ಮಿಶ್ರಣ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂಧನದಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಮಿತಿಮೀರಿದರೆ ವಾಹನಗಳ ಎಂಜಿನ್ ಹಾಳಾಗುವ ಆತಂಕವಿದೆ. ಈ ಕುರಿತು ಲ್ಯಾಬ್‌ನಲ್ಲಿ ಪರೀಕ್ಷಿಸಿ ದೃಢಪಡಿಸಲಾಗಿದ್ದು, ಇದರ ಹೊಣೆಗಾರಿಕೆ ಯಾರದ್ದು ಎಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕಿದೆ ಎಂದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೊಡಿಸಲು ಇಲ್ಲಿನ ಸಂಸದರು ಹಾಗೂ ಸಚಿವರು ಯಾಕೆ ಪ್ರಯತ್ನಿಸುತ್ತಿಲ್ಲ ಎಂದು ಮರು‌ಪ್ರಶ್ನಿಸಿದರು.

ಸಮುದ್ರ ಸೇರುತ್ತಿರುವ ವ್ಯರ್ಥ ನೀರನ್ನು ಸಂಕಷ್ಟದ ಸಂದರ್ಭದಲ್ಲಿ ಬಳಸಿಕೊಳ್ಳಲು ಮೇಕೆದಾಟು ಯೋಜನೆ ಅತ್ಯಗತ್ಯವಾಗಿದ್ದು, ಇದರಿಂದ ನೆರೆಯ ರಾಜ್ಯಗಳಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ಐದೇ ನಿಮಿಷದಲ್ಲಿ‌ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಹೇಳಿದ ಕೇಂದ್ರ ಸಚಿವ ಕುಮಾರಸ್ವಾಮಿ ಎಲ್ಲಿ ಹೋಗಿದ್ದಾರೆ‌ ಎಂದು ಕಿಡಿಕಾರಿದರು.

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪಗಳಿಗೆ ಉತ್ತರಿಸಿ, ಆರ್ ಟಿಐ ಮೂಲಕ ಯಾವ ಕ್ಷೇತ್ರದಲ್ಲಿ ಎಷ್ಟು ಅನುದಾನ ಬಿಡುಗಡೆಯಾಗಿದೆ ಎಂಬುದನ್ನು ಪರಿಶೀಲಿಸುವಂತೆ ಸವಾಲು ಹಾಕಿದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರನೇ ಸಾಲಿನಲ್ಲಿ ಕುಳಿತಿದ್ದರ ಬಗ್ಗೆ ವಿರೋಧ ಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸಿ, ಅವರು ತಡವಾಗಿ ಆಗಮಿಸಿದ್ದರಿಂದ ಆಯೋಜಕರು ಲಭ್ಯವಿದ್ದ ಜಾಗದಲ್ಲಿ ಕೂರಿಸಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ನಾಯಕರಿಗೆ ಸೂಕ್ತ ಗೌರವ ನೀಡುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಬೆಂಗಳೂರು ಕಮಿಷನರ್ ಕುರ್ಚಿಯಲ್ಲಿ ಹಿತೇಂದ್ರ: ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ ಸ್ವೀಕಾರ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರು ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ…

12 hours ago

ಕೇಂದ್ರದ ಅನುದಾನದ ಬಳಿಕ ಹೆಚ್ಚುವರಿ ಬರ ಪರಿಹಾರ; ಕೃಷಿ ಸಚಿವ ನರೇಂದ್ರ ಸ್ವಾಮಿ ಭರವಸೆ

ರಾಜ್ಯದ ರೈತರಿಗೆ 5 ಸಾವಿರ ರೂ. ಬರ ಪರಿಹಾರ ನೀಡಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣ ಹೆಚ್ಚುವರಿ ಪರಿಹಾರವನ್ನು…

12 hours ago

ಹಳ್ಳಿ ಹಳ್ಳಿಗೂ ನೇಗಿಲ ಯೋಗಿ ಯೋಜನೆ ತಲುಪಿಸಲು ಅಧಿಕಾರಿಗಳಿಗೆ ಕೃಷಿ ಸಚಿವ ಸೂಚನೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ನೇಗಿಲ ಯೋಗಿ ಯೋಜನೆಗೆ ಚಾಮರಾಜನಗರ, ಗುಂಡ್ಲುಪೇಟೆ ಆಯ್ಕೆಯಾಗಿದ್ದು, ಮುಂಗಾರಿಗೂ ಮೊದಲೇ ರೈತರಿಗೆ ಯೋಜನೆ ಕುರಿತು ವ್ಯಾಪಕ…

12 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 2 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಎ ಸಿಬ್ಬಂದಿ

ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…

1 day ago

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಸಾಮಾನ್ಯ ಕನ್ನಡ ಪತ್ರಿಕೆ ಮರುಸೇರ್ಪಡೆಗೆ ಕನ್ನಡ ಪಕ್ಷ ಒತ್ತಾಯ

  ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…

2 days ago

ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಬೆಳೆಸಿಕೊಳ್ಳುವುದು ಅಗತ್ಯ: ಡಾ. ವೆಂಕಟೇಶ್ ರೆಡ್ಡಿ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…

2 days ago