ಪರಿಶಿಷ್ಟರ ಹಣ ಗ್ಯಾರಂಟಿಗಳಿಗೆ: ಸರ್ಕಾರದ ನಡೆ ಖಂಡಿಸಿ ಮಾ.4ರಂದು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಪರಿಶಿಷ್ಟ ಜನರ ಅಭಿವೃದ್ದಿಗೆ ಮೀಸಲಿದ್ದ ಎಸ್ಸಿಪಿ, ಟಿಎಸ್ ಪಿ ಅನುದಾನವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರವುದನ್ನು ಖಂಡಿಸಿ ಮಾ.4 ರಂದು ನಗರದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಲಾಗುತ್ತದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ನವರು ಎಲ್ಲರಿಗೂ ಉಚಿತ ಎಂದು ಪಂಚ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದರು. ಅದಕ್ಕೆ ಈಗ ಹಣ ಹೊಂದಿಸಲಾಗದೆ. ಎಸ್ಸಿಪಿ ಮತ್ತು ಎಸ್ಟಿಪಿ ಮೀಸಲು ಹಣವನ್ನು ಬಳಸಿಕೊಳ್ಳುತ್ತಿದೆ. ಅದಕ್ಕಾಗಿ ನಿಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಸರ್ಕಾರವು ಬಜೆಟ್ ನಲ್ಲಿ ಮಂಡನೆ ಮಾಡಲು ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 14488 ಕೋಟೆಯನ್ನು ಪ್ರಸ್ತಾವನೆಗೆ ಕಳಸಿದ್ದಾರೆ ಈವರಗೆ ಆಯಾ ಜನಾಂಗದವರಿಗೆ ಮೀಸಲಾದ ಹಣ ಅದೇ ಜನಾಂಗದ ಅಭಿವೃದ್ಧಿಗೆ ಬಳಸಿಕೊಳ್ಳಲಾಗಿತ್ತು ಆದರೆ ಕಾಂಗ್ರೆಸ್ ಸರ್ಕಾರವು ದಲಿತರ ಪರ ಅಂತ ಹೇಳಿ ಅಧಿಕಾರಕ್ಕೆ ಬಂದ ನಂತರ ಅ ಅನುದಾನವನ್ನು ಬೇರೆ ಕಡೆ ಬಳಕೆ ಮಾಡಲಾಗುತ್ತಿದೆ ಇದರ ವಿರುದ್ದವಾಗಿ ನಡೆಯುವ ಪ್ರತಿಭಟನೆಗೆ ದಲಿತ ಪರವಾಗಿರುವ ಎಲ್ಲಾ ಸಂಘಟನೆಗಳು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಾಂಗ್ರೆಸ್ ಪಕ್ಷವು ಹೆಸರಿಗೆ ಮಾತ್ರ ಸಂವಿಧಾನದ ಪರ ಆದರೆ ಮಾಡುವುದು ಎಲ್ಲಾ ಸಂವಿಧಾನ ವಿರೋಧಿ ಕೆಲಸವಾಗಿದೆ ಎಸ್ಸಿ , ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರೆಂಟಿಗೆ ಬಳಸಿಕೊಂಡಿದೆ ರಾಜ್ಯದ ಕಾಂಗ್ರೆಸ್ ಸರ್ಕಾರ. ಇದನ್ನು ಕೈಬಿಡಲು ರಾಜ್ಯಾದ್ಯಾಂತ ನಮ್ಮ‌ ಪಕ್ಷ ಹೋರಾಟ ಮಾಡುತ್ತದೆ ರಾಜ್ಯ ಮುಖಂಡರ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಯಾವುದೇ ಕಾರಣಕ್ಕೂ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನ ಬೇರೆ ಕಾರ್ಯಕ್ರಮಗಳಿಗೆ ವರ್ಗಾವಣೆ ಆಗಬಾರದು ಇದರ ವಿರುದ್ದದ ಹೋರಾಟಕ್ಕೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದರು.

ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಶೇ.24 ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ನಮ್ಮ ಪಕ್ಷ ಗ್ಯಾರಂಟಿ ಯೋಜನೆಗಳ ವಿರುದ್ಧವಿಲ್ಲ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಅಗತ್ಯವಿರುವ 56,000 ಕೋಟಿಗಳಷ್ಟು ಹಣವನ್ನು ಪ್ರತ್ಯೇಕವಾಗಿ ಮೀಸಲಿಡಬೇಕು ಮತ್ತು ಎಸ್‌ಸಿ, ಎಸ್‌ಟಿ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಶೇ 24.8 ರಷ್ಟು ಹಣವನ್ನು ಬಳಸಬಾರದು ಎಂದರು.

ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಹಣ ಕಡಿತಗೊಳಿಸುವ ಮೂಲಕ ದಲಿತರ ಕಲ್ಯಾಣಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಯಾಮಾರಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯದ ಖಜಾನೆ ಖಾಲಿಯಾಗದೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಸಂದೀಪ್, ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯರಾದ ಎಸ್.ಬಿ ಮುನಿವೆಂಕಟಪ್ಪ, ಬಿ.ವಿ ಮಹೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಪ್ಪಿರಾಜು, ಮುಖಂಡರಾದ ವಾದಿರಾಜ್, ಹನುಮಂತಪ್ಪ, ಸುಂದರ್, ಕೆಂಬೋಡಿ ನಾರಾಯಣಸ್ವಾಮಿ, ತೇಜಸ್, ಬಾಲಾಜಿ, ತಿಮ್ಮರಾಯಪ್ಪ, ದಲಿತ ಸಂಘಟನೆಗಳ ಮುಖಂಡರಾದ ಹೂಹಳ್ಳಿ ಪ್ರಕಾಶ್, ವೆಂಕಟಾಚಲಪತಿ, ರಾಜಕುಮಾರ್, ಯುವಶಕ್ತಿ ಸುಬ್ಬು, ಮುಂತಾದವರು ಇದ್ದರು.

Leave a Reply

Your email address will not be published. Required fields are marked *

error: Content is protected !!