ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.
ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…