ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್)ಧಾರವಾಡ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಬೆಂಗಳೂರು ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 18 ರಿಂದ ಡಿಸೆಂಬರ್ 30 ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಭಾವಿ ಉದ್ಯಮಶೀಲರಿಗೆ ಸಣ್ಣ ಉದ್ದಿಮೆಯನ್ನು ಸ್ಥಾಪಿಸುವ ಬಗ್ಗೆ ಯೋಜನಾ ವರದಿ ತಯಾರಿಕೆಗೆ ಸರ್ಕಾರದ ಸವಲತ್ತುಗಳು, ರಿಯಾಯಿತಿಗಳು, ಸಹಾಯಧನ, ಲೆಕ್ಕ ಪತ್ರ ನಿರ್ವಹಣೆ ಹಾಗೂ ಸ್ವಯಂ ಉದ್ಯೊಗಕ್ಕೆ ಸಂಬಂಧ ಪಟ್ಟ ಹಾಗೂ PMEGP ಯೋಜನೆ ಬಗ್ಗೆ ಉಚಿತವಾಗಿ ಮಾರ್ಗದರ್ಶನ ಜೊತೆಗೆ ಪ್ರಮಾಣ ಪತ್ರ ನೀಡಲಾಗುವುದು.

ಫಲಾನುಭವಿಗಳ ಅನುಕೂಲತೆಗಳು :- ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು, ಉದ್ಯಮಶೀಲತೆ, ಬ್ಯಾಂಕಿಂಗ್, ಹಣಕಾಸು ನಿರ್ವಹಣೆ, ವ್ಯಾಪರ ಬಗ್ಗೆ ಮಾಹಿತಿ (ಅನುಭವವುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ) ಯೋಜನಾ ವರದಿ ತಯಾರಿಕೆ, PMEGP  ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ, MSME UDYAM certificate registration, FSSAI certificate registration, ಮಾರುಕಟ್ಟೆಯ ಬಗ್ಗೆ ಮಾಹಿತಿ, ಸರ್ಕಾರದ ಪ್ರಮಾಣ ಪತ್ರ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದೇವನಹಳ್ಳಿ – ದೊಡ್ಡಬಳ್ಳಾಪುರ ಮುಖ್ಯರಸ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮೊಬೈಲ್ ಸಂಖ್ಯೆ 8861738168 ಅನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *