ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್)ಧಾರವಾಡ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಬೆಂಗಳೂರು ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 18 ರಿಂದ ಡಿಸೆಂಬರ್ 30 ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಭಾವಿ ಉದ್ಯಮಶೀಲರಿಗೆ ಸಣ್ಣ ಉದ್ದಿಮೆಯನ್ನು ಸ್ಥಾಪಿಸುವ ಬಗ್ಗೆ ಯೋಜನಾ ವರದಿ ತಯಾರಿಕೆಗೆ ಸರ್ಕಾರದ ಸವಲತ್ತುಗಳು, ರಿಯಾಯಿತಿಗಳು, ಸಹಾಯಧನ, ಲೆಕ್ಕ ಪತ್ರ ನಿರ್ವಹಣೆ ಹಾಗೂ ಸ್ವಯಂ ಉದ್ಯೊಗಕ್ಕೆ ಸಂಬಂಧ ಪಟ್ಟ ಹಾಗೂ PMEGP ಯೋಜನೆ ಬಗ್ಗೆ ಉಚಿತವಾಗಿ ಮಾರ್ಗದರ್ಶನ ಜೊತೆಗೆ ಪ್ರಮಾಣ ಪತ್ರ ನೀಡಲಾಗುವುದು.
ಫಲಾನುಭವಿಗಳ ಅನುಕೂಲತೆಗಳು :- ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು, ಉದ್ಯಮಶೀಲತೆ, ಬ್ಯಾಂಕಿಂಗ್, ಹಣಕಾಸು ನಿರ್ವಹಣೆ, ವ್ಯಾಪರ ಬಗ್ಗೆ ಮಾಹಿತಿ (ಅನುಭವವುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ) ಯೋಜನಾ ವರದಿ ತಯಾರಿಕೆ, PMEGP ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ, MSME UDYAM certificate registration, FSSAI certificate registration, ಮಾರುಕಟ್ಟೆಯ ಬಗ್ಗೆ ಮಾಹಿತಿ, ಸರ್ಕಾರದ ಪ್ರಮಾಣ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದೇವನಹಳ್ಳಿ – ದೊಡ್ಡಬಳ್ಳಾಪುರ ಮುಖ್ಯರಸ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮೊಬೈಲ್ ಸಂಖ್ಯೆ 8861738168 ಅನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…