2023-24ನೇ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಯುವಜನರಿಗೆ ಉದ್ಯಮಶೀಲತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ ಆನ್ ಲೈನ್ ತಂತ್ರಾಂಶದ ಮೂಲಕ ಅರ್ಜಿಗಳನ್ನು 2023 ರ ನವೆಂಬರ್ 30 ರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು https://www.scsptsp.karnataka.gov.in/HMS/CDOC/EDPRe gistrationForm.aspread ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಟ 21 ವರ್ಷ ಗರಿಷ್ಟ 50 ವರ್ಷದೊಳಗಿರಬೇಕು. ಶೈಕ್ಷಣಿಕ ಅರ್ಹತೆಯು ಪಿ.ಯು.ಸಿ ಮತ್ತು ಮೇಲ್ಪಟ್ಟವರಾಗಿರಬೇಕು ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ.1000/-ಗಳನ್ನು ನೀಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217. 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ -562110. ದೂರವಾಣಿ ಸಂಖ್ಯೆ-080-29787447, ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ. 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ. 080-27623681, ಹೊಸಕೋಟೆ ತಾಲ್ಲೂಕು ದೂ.ಸಂ. 080-27931528, ನೆಲಮಂಗಲ ತಾಲ್ಲೂಕು ದೂ.ಸಂ. 080-27723172 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…