ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪಿಯುಸಿ ಹಾಗೂ ನಂತರದ ಕೋರ್ಸುಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸುಗಳ ವಿವರ ಹಾಗೂ ಪ್ರೋತ್ಸಾಹ ಧನ ಮೊತ್ತ ರೂ. ಗಳಲ್ಲಿ (ಪ್ರತಿ ವಿದ್ಯಾರ್ಥಿಗೆ)
1. II PUC/3 Years Diploma Polytechnic, 20,000/-
2. Degree, 25,000/-
3 Post Graduate Course like MA, M.sc, Mcom, MBA, MCA, MFA etc., 30,000/-
4 Agriculture/Engineering/Medicine/ Vetrinary, 35,000/-
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ 31 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಮತ್ತು ಸಲ್ಲಿಸಿದ ಅರ್ಜಿಯನ್ನು ಕಡ್ಡಾಯವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಛೇರಿಗೆ ಪಿಯುಸಿ ಹಾಗೂ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787448 ಅನ್ನು ಸಂಪರ್ಕಿಸುವುದು.
ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಸಲ್ಲಿಸಬೇಕಾಗುವ ದಾಖಲೆಗಳು:
1. ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ.
2. ಜಾತಿ ಪ್ರಮಾಣ ಪತ್ರ.
3. ಆಧಾರ್ ಕಾರ್ಡ್ ಪ್ರತಿ.
4. ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರಗಳು/ಅಂಕಪಟ್ಟಿಗಳು.
5. ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ
6. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
ಅರ್ಜಿ ಸಲ್ಲಿಸಲು ಪಿ.ಯು.ಸಿ/ಪದವಿ/ಸ್ವಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…