ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.twd.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ ಜೂನ್ 18 ರಿಂದ ಪ್ರಾರಂಭವಾಗಿ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.
*ಷರತ್ತುಗಳು*
1. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು.
2. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
3. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.
4. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು.
5. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು,ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು.
6. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ತರಬೇತಿ ನಿಯೋಜಿಸಲಾಗುವುದು.
7. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯ ವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ.
8. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
9. ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
10. ಆಯ್ಕೆ ಸಮಿತಿಯ ತಿರ್ಮಾನವೇ ಅಂತಿಮ ತೀರ್ಮಾನ ವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ನಂ-205 ಎರಡನೇ ಮಹಡಿ,ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ; 080-29787448 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…