Categories: ಮೈಸೂರು

ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ  ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ  ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.

ಹಸಿವು ಮುಕ್ತ ಕರ್ನಾಟಕ  ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್  ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

8 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

8 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

11 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

13 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

14 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

15 hours ago