ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.
ಹಸಿವು ಮುಕ್ತ ಕರ್ನಾಟಕ ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…